Tiranga Programme: ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಲಹೆ

ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಸ್ವಾತಂತ್ರದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ  ಈ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು, ನಾಗರಿಕ ಸಂಸ್ಥೆಗಳು, ಸಾರ್ವಜನಿಕರು, ಶಾಲಾ-ಕಾಲೇಜು ಮಕ್ಕಳು, ಇತರೆ ಎಲ್ಲಾ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಕ್ರಿಯಾಶೀಲವಾಗಿ  ಭಾಗವಹಿಸುವಂತೆ ವಹಿಸಬೇಕಾದ ಕ್ರಮಗಳ ಬಗ್ಗೆ […]

Rain DC Visit: ಕೃಷ್ಣಾ ನದಿ ನೀರಿನಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ವಿಜಯಪುರ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಲ್ಲದಿದ್ದರೂ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಪ್ರವಾಹ ಎದುರಿಸುತ್ತಿರುವ ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ನಾನಾ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ ಮತ್ತು ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ವಿಜಯಪುರ ಜಿಲ್ಲೆಯಲ್ಲಿ ಮಳೆ ಸಮರ್ಪಕವಾಗಿಲ್ಲ.  ಆದರೆ, ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿಗೆ ನೀರನ ಒಳಹರಿವು ಹೆಚ್ಚಾಗಿದೆ.  ಹೀಗಾಗಿ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದಿಂದ ನೀರನ್ನು ಕೃಷ್ಣಾ ನದಿಗೆ ಹೊರ ಬಿಡಲಾಗುತ್ತಿದೆ.  ಈ […]

Earthquake DC: ವಿಜಯಪುರ ಜಿಲ್ಲೆಯಲ್ಲಿ ಹಲವೆಡೆ ಭೂಕಂಪನ: ಭಯಭೀತರಾಗದಂತೆ ಸಾರ್ವಜನಿಕರಲ್ಲಿ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮನವಿ

ವಿಜಯಪುರ: ಜಿಲ್ಲೆಯ ಕನ್ನೂರ ಸೇರಿದಂತೆ ನಾನಾ ಕಡೆ ಬೆಳಿಗ್ಗೆ ಸಂಭವಿಸಿದ 4.4 ತೀವ್ರತೆಯ ಲಘು ಭೂಕಂಪನ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕರು ಭಯಪಡಬಾರದು ಎಂದು ಜಿಲ್ಲಾಧಿಕಾರಿ  ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ. ಭೂಕಂಪನದ ವಿಷಯ ತಿಳಿಯುತ್ತಿದ್ದಂತೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರ ಬೆಂಗಳೂರಿನ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಭೂಕಂಪನ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ವಿಜಯಪುರ ಮತ್ತು ಮಹಾರಾಷ್ಟ್ರ ಪ್ರದೇಶದ ಗಡಿ ಪ್ರದೇಶದ ವಿವಿಧೆಡೆ ಈ ಲಘು ಭೂಕಂಪನ ಸಂಭವಿಸಿದೆ. ಜುಲೈ 9ರಂದು ಬೆಳಗಿನ 6.22ರ ಸುಮಾರಿನ […]

Ration Card E-KYC: ನ್ಯಾಯ ಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಲು ಪಡಿತರ ಚೀಟಿದಾರರಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ

ವಿಜಯಪುರ: ನ್ಯಾಯ ಬೆಲೆ ಅಂಗಡಿಯಲ್ಲಿ(Ration Shop) ಇ-ಕೆವೈಸಿಯನ್ನು(E-KYC) ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ(Deputy Commissioner) ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danamannavar) ಅವರು ಪಡಿತರ ಚೀಟಿದಾರರಲ್ಲಿ(Card Holders) ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಸೇರಿದಂತೆ ಒಟ್ಟು 495943 ಪಡಿತರ ಚೀಟಿಗಳಿದ್ದು, ಇವುಗಳ ಪೈಕಿ 393397 ಪಡಿತರ ಚೀಟಿದಾರರು ಮಾತ್ರ ಇಕೆವೈಸಿಯನ್ನು ಮಾಡಿಸಿಕೊಂಡಿದ್ದಾರೆ. ಇನ್ನು 1,02,546 ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಮಾಡಿಸಿರುವುದಿಲ್ಲ. ಕೆಲವೊಂದು ಪಡಿತರ ಚೀಟಿದಾರರು […]