ಹರಿಹರದಲ್ಲಿ ತುಂಗಾ ಆರತಿ: ಉತ್ತಮ ಪ್ರವಾಸಿ, ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿ- ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ: ಹರಿಹರ(Harohara) ಕ್ಷೇತ್ರದ ತುಂಗಭದ್ರಾ(Tunga Bhadra) ನದಿ ತಟದಲ್ಲಿ 108 ಯೋಗ ಮಂಟಪಗಳನ್ನು ನಿರ್ಮಿಸಿ ಉತ್ತರದಲ್ಲಿ ಗಂಗಾ ಆರತಿ(Gangs Station) ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿಯನ್ನು ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ಇದು ಉತ್ತಮ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ಶ್ರೀ ವಚನಾನಂದ ಜಗದ್ಗುರುಗಳು ತುಂಗಾರತಿ ಕಾರ್ಯಕ್ರಮ ಏರ್ಪಡಿಸಲು ಸ್ವಚ್ಛತಾ ಕಾರ್ಯವನ್ನು ನಡೆಸಿ ಉತ್ತಮ ವಾತಾವರಣ ನಿರ್ಮಿಸಿದ್ದಾರೆ. ಪ್ರತಿನಿತ್ಯ ತುಂಗಭದ್ರೆಯ ಪೂಜೆ […]

ತುಂಗಾಭದ್ರಾ ಆರತಿಯಿಂದ – ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ

ಬೆಂಗಳೂರು: ತುಂಗಾಭದ್ರಾ ಆರತಿಯ ಪ್ರಾರಂಭದ ಮೂಲಕ ದಕ್ಷಿಣ ಕಾಶಿ ಎಂದೇ ಪ್ರಸಿದ್ದ ಹರಕ್ಷೇತ್ರ ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದುಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು. ಬೆಂಗಳೂರಿನ ಶ್ವಾಸಯೋಗ ಕೇಂದ್ರದಲ್ಲಿ ಫೆಬ್ರವರಿ 20, 2022 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಿಂದ ನಡೆಯಲಿರುವ 108 ತುಂಗಾಭದ್ರಾ ಆರತಿ ಮಂಟಪಗಳ ಶಿಲಾನ್ಯಾಸ ಕಾರ್ಯಕ್ರಮದ ಮಾಹಿತಿ ಹಾಗೂ ಕಾನ್ಸೆಪ್ಟ್‌ ವಿಡಿಯೋವನ್ನು […]