Panchamasali Demand: ಜೂ. 27 ರೊಳಗೆ ಮೀಸಲಾತಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳದಿದ್ದರೆ ಉಗ್ರ ಹೋರಾಟ- ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಗೆ
ಬೆಂಗಳೂರು: ಲಿಂಗಾಯಿತ(Lingayat) ಪಂಚಮಸಾಲಿ(Panchamasali) ಸಮುದಾಯಕ್ಕೆ(Community) 2ಎ ಮೀಸಲಾತಿ(2A Reservation) ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Shree Basavajaya Mrutyunjaya Swamiji) ನೇತೃತ್ವದಲ್ಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ಸ್ವಾಮೀಜಿಗಳ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿದ ಸಮಾಜದ ಮುಖಂಡರು, ಜೂ. 27ರೊಳಗೆ ಪ್ರಮುಖ ಹೋರಾಟಗಾರರೊಂದಿಗೆ ಅಂತಿಮ ಸುತ್ತಿನ ಮಾತುಕತೆಗೆ ಸಮಯ ನಿಗದಿ ಮಾಡಬೇಕು. […]
Syllabus Issue: ಪಠ್ಯಪುಸ್ತಕ ಸಮಿತಿ ರದ್ದುಪಡಿಸಲು ಆಗ್ರಹಿಸಿ ಬಸವಣ್ಣನವರ ಜನ್ಮಸ್ಥಳದಲ್ಲಿ ಪ್ರತಿಭಟನೆ
ವಿಜಯಪುರ: ಒಂಬತ್ತನೇ ತರಗತಿಯ(Ninth Standard) ಪಠ್ಯದಲ್ಲಿ(Syllabus) ಅಣ್ಣ ಬಸವಣ್ಣನವರನ್ನು(Anna Basavanna) ವೈದಿಕ ಗೊಳಿಸಲಾಗಿದೆ ಎಂದು ಆರೋಪಿಸಿ ಮತ್ತು ಪಠ್ಯಪುಸ್ತಕ ಸಮಿತಿ ರದ್ದು(Cancel) ಮಾಡುವಂತೆ ಒತ್ತಾಯಿಸಿ ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ(Basavanadu Bagewadi) ಪ್ರತಿಭಟನೆ ನಡೆಸಲಾಯಿತು. ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಂಕರಗೌಡ ಬಿರಾದಾರ ಮಾತನಾಡಿದರು. ಬಸವಣ್ಣನವರನ್ನು ವೀರಶೈವರನ್ನಾಗಿ ಚಿತ್ರಿಸಿದ್ದು ಖಂಡನೀಯ. ಬಸವಣ್ಣನವರು […]
Panchamasali Reservaton: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ಮುಖ್ಯಮಂತ್ರಿ ಶಿಗ್ಗಾವಿ ನಿವಾಸದ ಎದುರು ಧರಣಿ ನಡೆಸಲು ಕೂಡಲ ಸಂಗಮ ಸ್ವಾಮೀಜಿ ನಿರ್ಧಾರ
ವಿಜಯಪುರ: ಪಂಚಮಸಾಲಿ(Panchamasali) ಸಮುದಾಯಕ್ಕೆ 2ಎ ಮೀಸಲಾತಿ(2A Reservation) ಘೋಷಣೆ(Announcement) ಮಾಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ(Chief Minister) ಶಿಗ್ಗಾವಿ ನಿವಾಸದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Basavajaya Mrutyunjaya Swamiji) ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ತಕ್ಷಣ ಅನೇಕ ಬಾರಿ ನಮಗೆ ಬಹಳ ದೊಡ್ಡ ಭರವಸೆ ಕೊಟ್ಟಿದ್ದರು. ಅವರ ಮೇಲೆ […]
ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ವತಿಯಿಂದ ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ
ವಿಜಯಪುರ: ದಿನೇ ದಿನೇ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಯಿಂದಾಗಿ ಜನತೆ ರೋಸಿ ಹೋಗಿದ್ದು, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಜಯಪುರ ಜಿಲ್ಲಾದ್ಯಂತ ಅಲ್ಲಲ್ಲಿ ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನ ನಡೆಸಲಾಯಿತು. ವಿಜಯಪುರ ನಗರದ ಖಾದಿ ಗ್ರಾಮೋದ್ಯೋಗ ವೃತ್ತದಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರಿಫ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಖಾಲಿ ಗ್ಯಾಸ್ ಸಿಲೆಂಡರ್‍ಗಳು ಮತ್ತು ಮೋಟರ ಸೈಕಲ್‍ಗಳನ್ನು ಅಡ್ಡ ಮಲಗಿಸಿ ಅವುಗಳಿಗೆ ಹಾರ ಹಾಕಿ ಹಲಿಗೆಯನ್ನು ಬಾರಿಸುತ್ತ ಪ್ರಧಾನಿ ಮೋದಿ ಅವರ ಪ್ರತಿಕೃತಿ ದಹನ […]
ಖಾಲಿಯಿರುವ ಆಂಗ್ಲಭಾಷೆ ಶಿಕ್ಷಕರ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ, ಮನವಿ ಪತ್ರ ಸಲ್ಲಿಕೆ
ವಿಜಯಪುರ: ರಾಜ್ಯದ(State) ನಾನಾ ಜಿಲ್ಲೆಗಳಲ್ಲಿ(Various Districts) ಖಾಲಿ ಇರುವ(Vacant) ಆಂಗ್ಲಭಾಷೆ(English) ಶಿಕ್ಷಕರ(Teachers) ಹುದ್ದೆಗಳನ್ನು(Posts) ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ವಿಜಯಪುರದಲ್ಲಿ ನಿರುದ್ಯೋಗ ಯುವಜನ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿಜಯಪುರ ನಗರದ ಜೋಡಗುಮ್ಮಟದಿಂದ ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮೂಲಕ ಬೃಹತ್ ಪ್ರತಿಭಟನಾ ಜಾಥಾ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿಗಳಿಗೆ ಹಾಗೂ ಡಿಡಿಪಿಐ ಅವರಿಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ […]
ಸಚಿವ ಈಶ್ವರಪ್ಪ ರಾಜಿನಾಮೆಗೆ ಆಗ್ರಹಿಸಿ ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ವಿಜಯಪುರ: ಸಚಿವ ಕೆ. ಎಸ್. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ನಗರದ ಡಾ. ಬಿ..ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತು ಮಾತನಾಡಿದ್ದು […]
ರಾಯಚೂರು ಘಟನೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಬೆಂಗಳೂರು: ರಾಯಚೂರು ಘಟನೆಯನ್ನು ಖಂಡಿಸಿ ನಾಬಾ ಸಂಘಟಬೆಗಳ ಸಾವಿರಾರು ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಜ. 26 ರಂದು ಬಾಬಾಸಾಹೆಬರ ಭಾವಚಿತ್ರಕ್ಕೆ ಅವಮಾನಿಸಲಾಗಿದೆ. ಇದಕ್ಕೆ ಕಾರಣರಾದ ನ್ಯಾಯಾಧೀಶರ ವಿರುದ್ಧ ಸರಕಾರ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿಧಾನಸೌಧ – ಹೈಕೋರ್ಟ್ ಚಲೊ ಜಾಥಾ ಸಂಗವಾಗಿ ಈ ಪ್ರತಿಭಟನಾ ಮೆರವಣಿಗೆ ನಡೆಸಲಾತಿತು. ಬೆಂಗಳೂರಿನ ಕೆಂಪೇಗೌಡ ರೇಲ್ವೆ ನಿಲ್ದಾಣದಿಂದ ಆರಂಭವಾದ ಬೃಹತ್ ಪ್ರತಿಭಟನೆಲಾ ಮೆರವಣಿಗೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ […]