Rain DC Visit: ಕೃಷ್ಣಾ ನದಿ ನೀರಿನಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ವಿಜಯಪುರ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ, ಪರಿಶೀಲನೆ
ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಲ್ಲದಿದ್ದರೂ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಪ್ರವಾಹ ಎದುರಿಸುತ್ತಿರುವ ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ನಾನಾ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ ಮತ್ತು ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಜಿಲ್ಲೆಯಲ್ಲಿ ಮಳೆ ಸಮರ್ಪಕವಾಗಿಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿಗೆ ನೀರನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದಿಂದ ನೀರನ್ನು ಕೃಷ್ಣಾ ನದಿಗೆ ಹೊರ ಬಿಡಲಾಗುತ್ತಿದೆ. ಈ […]
Bus MB Patil: ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾಮಗಳಿಗೆ ಹೆಚ್ಚುವರಿ ಬಸ್ ಸೇವೆ ಆರಂಭ- ಎಂ. ಬಿ. ಪಾಟೀಲ
ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ಶಿರಬೂರ, ಬಬಲಾದಿ, ಕೊಟಬಾಗಿ, ಹಂಚಿನಾಳ, ಮಂಗಳೂರು, ಮಮದಾಪುರ ಗ್ರಾಮಗಳಿಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಮ್ಮ ಗ್ರಾಮಗಳಿಗೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಮತ್ತು ಕೆಲವು ಬಸ್ಸುಗಳ ಮಾರ್ಗ ಬದಲಾವಣೆ ಮಾಡುವಂತೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ತಮಗೆ ಮನವಿ ಮಾಡಿದ್ದರು. ಅದರಂತೆ […]
PSI Siddharamaiah Yatnal: ಪಿಎಸ್ಐ ನೇಮಕಾತಿ ಹಗರಣ ಮುಚ್ಚಿಹಾಕಲು ಪ್ರಯತ್ನ ನಡೆದಿದೆ- ಸಿದ್ಧರಾಮಯ್ಯ ಪೇಟಾ ಸುತ್ತಿಕೊಂಡು ಭಂಡಾರ ಹಚ್ಚಿಕೊಳ್ಳಲಿ- ಯತ್ನಾಳ
ವಿಜಯಪುರ: ಪ್ರಭಾವಿಗಳು ಶಾಮೀಲಾಗಿರುವುದರಿಂದ ಪಿಎಸ್‌ಐ ನೇಮಕಾತಿ ಹಗರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವjರು, ಪಿಎಸ್‌ಐ ನೇಮಕಾತಿ ಹಗರಣ ಮುಚ್ಚಿಹಾಕಲು ಪ್ರಯತ್ನ ನಡೆಯುತ್ತಿದೆ. ಈ ಮುಂಚೆಯೇ ನಾನು ಈ ಬಗ್ಗೆ ಹೇಳಿದ್ದೇನೆ. ನ್ಯಾಯಾಧೀಶರು ಸ್ಚ್ರಾಂಗ್ ಇದ್ದಾರೆಂಬ ಕಾರಣಕ್ಕೆ ಇಷ್ಟೇಲ್ಲ ಬಹಿರಂಗವಾಗಿದೆ. ಈಗ ಬಂಧಿಸಲಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಪಾಲ್ ಮಾತ್ರ ಈ ಹಗರಣದಲ್ಲಿ ಭಾಗಿಯಾಗಿಲ್ಲ. ಇದರಲ್ಲಿ ಬಹಳಷ್ಟು […]
Earthquake Damage: ಭೂಕಂಪನ ಎಫೆಕ್ಟ್- ಬತ್ತಿದ ಭಾವಿ, ತಿಕೋಟಾ, ಇಂಡಿ ತಾಲೂಕುಗಳಲ್ಲಿ 48 ಮನೆಗಳಿಗೆ ಹಾನಿ
ವಿಜಯಪುರ: ಬೆಳಿಗ್ಗೆ ಸಂಭವಿಸಿದ ಭೂಕಂಪನ ದಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ಮತ್ತು ಇಂಡಿ ತಾಲೂಕುಗಳಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ತಿಕೋಟಾ ತಾಲೂಕಿನ ಅರಕೇರಿ ಮತ್ತು ಅರಕೇರಿ ತಾಂಡಾಗಳಲ್ಲಿ ಭೂಕಂಪನದಿಂದ ಹಾನಿಯಾಗಿದೆ. ಹಿರಿಯ ಭೂ ವಿಜ್ಞಾನಿ, ತಿಕೋಟಾ ಕಂದಾಯ ನಿರೀಕ್ಷಕರು ಮತ್ತು ಅರಕೇರಿ ಗ್ರಾಮ ಲೆಕ್ಕಾಧಿಕಾರಿ ಅವರು ತಹಸೀಲ್ದಾರ ಅವರ ಸಮ್ಮುಖದಲ್ಲಿ ಜಂಟಿಯಾಗಿ ಹಾನಿಯಾದ ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು […]
Earthquake DC: ವಿಜಯಪುರ ಜಿಲ್ಲೆಯಲ್ಲಿ ಹಲವೆಡೆ ಭೂಕಂಪನ: ಭಯಭೀತರಾಗದಂತೆ ಸಾರ್ವಜನಿಕರಲ್ಲಿ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮನವಿ
ವಿಜಯಪುರ: ಜಿಲ್ಲೆಯ ಕನ್ನೂರ ಸೇರಿದಂತೆ ನಾನಾ ಕಡೆ ಬೆಳಿಗ್ಗೆ ಸಂಭವಿಸಿದ 4.4 ತೀವ್ರತೆಯ ಲಘು ಭೂಕಂಪನ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕರು ಭಯಪಡಬಾರದು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ. ಭೂಕಂಪನದ ವಿಷಯ ತಿಳಿಯುತ್ತಿದ್ದಂತೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರ ಬೆಂಗಳೂರಿನ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಭೂಕಂಪನ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ವಿಜಯಪುರ ಮತ್ತು ಮಹಾರಾಷ್ಟ್ರ ಪ್ರದೇಶದ ಗಡಿ ಪ್ರದೇಶದ ವಿವಿಧೆಡೆ ಈ ಲಘು ಭೂಕಂಪನ ಸಂಭವಿಸಿದೆ. ಜುಲೈ 9ರಂದು ಬೆಳಗಿನ 6.22ರ ಸುಮಾರಿನ […]
Farmers Bapugouda Patil: ರೈತ ಸಂಪರ್ಕ ಕೇಂದ್ರಕ್ಕೆ ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಾಪುಗೌಡ ಪಾಟೀಲ ಭೇಟಿ, ಮಾಹಿತಿ ಸಂಗ್ರಹಣೆ
ವಿಜಯಪುರ: ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕಿಸಾನ್ ಕಾಂಗ್ರೆಸ್ ವಿಜಯಪುರ ಜಿಲ್ಲಾಧ್ಯಕ್ಷ ಬಾಪುಗೌಡ ಪಾಟೀಲ(ವಡವಡಗಿ) ಹೂವಿನ ಹಿಪ್ಪರಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿತ್ತನೆ ಬೀಜಗಳ ದಾಸ್ತಾನು ಕುರಿತು ಅದಿಕಾರಿಗಳಿಂದ ಮಾಹಿತಿ ಪಡೆದ ಅವರು, ಲಘು ಪೋಷಕಾಂಶಗಳ, ಬಿತ್ತನೆ ಬೀಜ ಕುರಿತೂ ಮಾಹಿತಿ ಸಂಗ್ರಹಿಸಿದರು. ಸರಿಯಾಗಿ ರೈತರಿಗೆ ತಲುಪಿಸಿ ರೈತರಿಗೆ ನೆರವಾಗಬೇಕು, ರೈತರಿಂದ ಹೆಚ್ಚುವರಿ ಹಣ ಪಡೆಯಬೇಡಿ. ಬೀಜ ದಾಸ್ತಾನು ಕಾಯ್ದುಕೊಳ್ಳಿ. ಎಲ್ಲಾ ರೈತರಿಗೂ ಬೀಜ ಸಿಗುವಂತೆ ನೊಡಿಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಕ್ಕೆ, […]
Liquor MBP Warn: ಮಹಿಳೆಯರ ಅಳಲಿಗೆ ಸ್ಪಂದಿಸಿ ಅಬಕಾರಿ, ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಎಂ. ಬಿ. ಪಾಟೀಲ- ಯಾಕೆ ಗೊತ್ತಾ?
ವಿಜಯಪುರ: ಅಬಕಾರಿ ಮತ್ತು ಪೊಲೀಸ ಇಲಾಖೆ ಅಧಿಕಾರಿಗಳನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತರಾಟೆಗೆ ತೆಗೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟದಿಂದ ಸಮಸ್ಯೆಯಾಗುತ್ತಿದೆ. ಅಪ್ರಾಪ್ತ ಯುವಕರು ಕೂಡ ಮದ್ಯದ ದಾಸರಾಗುತ್ತಿದ್ದಾರೆ. ಈಗಾಗಲೇ ಕೆಲವು ಪುರುಷರು ಸಾವಿಗೀಡಾಗಿದ್ದಾರೆ. ಇದರಿಂದ ಕುಟುಂಬ ನಿರ್ವಹಣೆ ಜವಾಬ್ದಾರಿ ಮಹಿಳೆಯರಿಗೆ ಭಾರವಾಗುತ್ತಿದೆ. ಆದ್ದರಿಂದ ಈ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮದ ಮಹಿಳೆಯರು ವಿಜಯಪುರದಲ್ಲಿ ತಮ್ಮ ಶಾಸಕರಾದ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ […]
MLC Sunilgouda: ಬಬಲೇಶ್ವರ, ದೇವರಗೆಣ್ಣೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸುನೀಲಗೌಡ ಪಾಟೀಲ
ವಿಜಯಪುರ: ಬಬಲೇಶ್ವರ ಮತ್ತು ದೇವರಗೆಣ್ಣೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಚಾಲನೆ ನೀಡಿದರು. ಬಬಲೇಶ್ವರ ಪಟ್ಟಣದಲ್ಲಿ ನಿರ್ಮಿತಿ ಕೇಂದ್ರ ರೂ.10 ಲಕ್ಷ ವೆಚ್ಚದಲ್ಲಿ ಸರಕಾರಿ ಹೆಣ್ಣು ಮಕ್ಕಳ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಸುಜಾತಾ ಕಳ್ಳೀಮನಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಜಾತ ಜಂಗಮಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ಮುಖಂಡರಾದ ಬಿ.ಜಿ.ಬಿರಾದಾರ, […]
Foreign Love Marriage: ಫಾರಿನ್ ವಧು ಇಂಡಿಯನ್ ವರ ಬಸವ ನಾಡಿನಲ್ಲಿ ಹಿಂದೂ ಸಂಪ್ರದಾಯದಂತೆ ನಡೆದ ಲವ್ ಕಮ್ ಅರೆಂಜ್ ಮ್ಯಾರೇಜ್
ವಿಜಯಪುರ: ಪ್ರೀತಿ, ಪ್ರೇಮ ಅವರುಸಿರಾಗಿತ್ತು. ಐದು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿಗೆ ಹಿರಿಯರೂ ಕೂಡ ಯಾವುದೇ ಪ್ರತಿರೋಧ ತೋರಿಸದೇ ಒಪ್ಪಿಗೆ ಸೂಚಿಸಿದ್ದೂ ಗಮನಾರ್ಹವಾಗಿತ್ತು. ಇದು ಸಪ್ತಸಾಗರದಾಚೆ ನಡೆದ ಲವ್ ಸ್ಟೋರಿಯ ಕಥೆ. ಒಂದೇ ಊರಿನಲ್ಲಿ ಪರಸ್ಪರ ಪ್ರೀತಿಸುತ್ತಿದ್ದರೂ ನಾನಾ ಕಾರಣಗಳಿಂದಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಾಧ್ಯವಾಗದೇ ಪ್ರೇಮ, ಪ್ರೀತಿ ಮದುವೆಗೂ ಮುಂಚೆಯೇ ಮುರಿದು ಬಿದ್ದಿರುವ ಹಲವಾರು ಘಟನೆಗಳ ಮಧ್ಯೆಯೇ ಈ ವಿವಾಹ ಗಮನ ಸೆಳೆಯಿತು. ವರ ಭಾರತದ ಬಸವ ನಾಡಿನವನಾಗಿದ್ದಾರೆ, ವಧು ಸಪ್ತಸಾಗರದಾಚೆಯ ಕೆನೆಡಾ ಮೂಲದವಳಾಗಿದ್ದಾಳೆ. ಬಸವ […]
AP Govt Shrishail: ಆಂಧ್ರ ಪ್ರದೇಶ ಸರಕಾರ ದಿಂದ ಶ್ರೀಶೈಲಕ್ಕೆ ಪೀಠಕ್ಕೆ 10 ಎಕರೆ ಜಮೀನು ಮಂಜೂರು- ಡಾ. ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ
ವಿಜಯಪುರ: ಆಂಧ್ರ ಪ್ರದೇಶ ಸರಕಾರ ಶ್ರೀಶೈಲ ಪೀಠಕ್ಕೆ 10 ಎಕರೆ ಜಮೀನನ್ನು ಮಂಜೂರು ಮಾಡಿದೆ. ಅದರಲ್ಲಿ ಐದು ಎಕರೆ ಸ್ಥಳವನ್ನು ದೇವಾಸ್ಥಾನಕ್ಕೆ ಒಪ್ಪಿಸಿದೆ. ಇನ್ನುಳಿದ ಐದು ಎಕರೆ ಜಾಗದಲ್ಲಿ 100 ಬೆಡ್ ಸುಸಜ್ಜಿತ ಆಸ್ಪತ್ರೆ, ಪಾದಯಾತ್ರಿಕರಿಗೆ 500 ಕೋಣೆಗಳ ಯಾತ್ರಿ ನಿವಾಸ, 5000 ಕಂಬಗಳ ಮಂಟಪ ನಿರ್ಮಾಣ, ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಶ್ರೀಶೈಲ […]